ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್‌ನ ಮುಂಬೈ-ಬೆಂಗಳೂರು ಹೈವೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
ಎರಡು ಕಾರ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.