ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ವೇಗವಾಗಿ ಬಂದ ಕಂಟೇನರ್ ಕಾರುಗಳಿಗೆ ಡಿಕ್ಕಿಯಾಗಿದ್ದು, ಬರೋಬ್ಬರಿ ಐದು ಕಾರುಗಳು ಜಖಂ ಆಗಿವೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದಾಗಿ ಪುಣೆಗೆ ತೆರಳುವ ಲೇನ್‌ನಲ್ಲಿ ಸಂಚಾರ ಬಂದ್ ಆಗಿದೆ. ಕಾರ್‌ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ.