Thursday, January 1, 2026

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ.

ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್​ ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!