ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಟೆಕ್ಸಾಸ್‌ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ.
ಅರ್ಕಾನ್ಸಾಸ್‌ನ ಬೆಂಟನ್‌ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎಸ್‌ಯುವಿ ಕಾರು ಹೊತ್ತಿ ಉರಿಯಿತು. ಪರಿಣಾಮ ಕಾರಿನಲ್ಲಿದ್ದವರು ಸುಟ್ಟು ಕರಕಲಾಗಿದ್ದಾರೆ. ಮೃತರ ಗುರುತುಗಳನ್ನು ಖಚಿತಪಡಿಸಲು ಅಧಿಕಾರಿಗಳು ಡಿಎನ್ಎ ಪರೀಕ್ಷೆ ಮಾಡಿಸಿದ್ದಾರೆ.
ಮೃತರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ. ಓರಂಪತಿ ಮತ್ತು ಅವರ ಸ್ನೇಹಿತ ಶೇಕ್ ಡಲ್ಲಾಸ್‌ನಲ್ಲಿರುವ ತನ್ನ ಸೋದರಸಂಬಂಧಿಯನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದರು. ಲೋಕೇಶ್ ಪಾಲಾಚಾರ್ಲ ಪತ್ನಿಯನ್ನು ಭೇಟಿಯಾಗಲು ಬೆಂಟನ್‌ವಿಲ್ಲೆಗೆ ತೆರಳುತ್ತಿದ್ದರು. ಟೆಕ್ಸಾಸ್ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಪಡೆದಿರುವ ದರ್ಶಿನಿ ವಾಸುದೇವನ್, ಬೆಂಟನ್‌ವಿಲ್ಲೆಯಲ್ಲಿರುವ ತನ್ನ ಚಿಕ್ಕಪ್ಪನನ್ನು ಭೇಟಿ ಮಾಡಲು ಹೋಗುತ್ತಿದ್ದರು ಎನ್ನಲಾಗಿದೆ.