ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಝಾನ್ಸಿ ನಗರದಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ. ಮೃತ ಆಕಾಶ್ ಕೆಲವೇ ಗಂಟೆಗಳಲ್ಲಿ ಹಸೆಮಣೆ ಏರಬೇಕಿದ್ದ ವರನಾಗಿದ್ದು ಮದುವೆ ಸ್ಥಳಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ವಧುವಿನ ಮನೆಯಿಂದ 10 ಕಿ.ಮೀ ದೂರದಲ್ಲಿರುವ ಛಾಪ್ರಾ ಕಡೆಗೆ ಮದುವೆ ತಂಡ ತೆರಳುತ್ತಿದ್ದ ವೇಳೆ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ.
ಈ ಡಿಕ್ಕಿಯಾದ ತಕ್ಷಣ ಕಾರಿನ ಸಿಎನ್‌ಜಿ ಟ್ಯಾಂಕ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ. ಆಕಾಶ್ ಅಹಿರ್ವಾರ್ (25), ಅವರ ಸಹೋದರ ಆಶಿಶ್ (20), 7 ವರ್ಷದ ಸೋದರಳಿಯ ಮತ್ತು ಚಾಲಕ ಜೈಕರನ್ ಸುಟ್ಟು ಕರಕಲಾಗಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಿರುವ ಟ್ರಕ್ ಚಾಲಕನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.