ನಾಗ್ಪುರ ಕಂಪನಿಯಲ್ಲಿ ಭೀಕರ ಸ್ಫೋಟ: 9 ಮಂದಿ ಸಾವು, ಹಲವರಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ನಾಗ್ಪುರ ಕಂಪನಿಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 9 ಜನ ಸಾವನ್ನಪ್ಪಿದ್ದು , ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಭಾನುವಾರ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿದೆ.

ಸ್ಪೋಟದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ.

ಕಲ್ಲಿದ್ದಲು ಸ್ಫೋಟಗೊಳಿಸಲು ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿದ್ದು, ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಾಧನಗಳ ಪೂರೈಕೆಯೊಂದಿಗೆ ವ್ಯವಹರಿಸುತ್ತಿರುವುದಾಗಿ ತಿಳಿದುಬಂದಿದೆ. ಕಂಪನಿ ಆವರಣದ ಸುತ್ತಲೂ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!