ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ.
ಬ್ಯಾಡರಹಳ್ಳಿಯಲ್ಲಿನ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಉಂಟಾಗಿದೆ. ಇದರಿಂದಾಗಿ ಪ್ಲಾಸ್ಟಿಕ್ ಕಾರ್ಖಾನೆ ಹೊತ್ತಿ ಉರಿಯುತ್ತಿದೆ.
ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿಯ ಹೊಗೆ ಸುತ್ತಮುತ್ತಲ ವ್ಯಾಪ್ತಿಗೆ ಆವರಿಸಿದ್ದು, ಜನರು ಭಯಭೀತರಾಗಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.