ಸರ್ಕಾರಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರು ಹೊರವಲಯದ ಆನೇಕಲ್ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಏಕಾಏಕಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ರೋಗಿಗಳು ಹಾಗೂ ಸಾರ್ವಜನಿಕರು ಪ್ರಾಣಭಯದಿಂದ ಆಸ್ಪತ್ರೆಯಿಂದ ಹೊರಗೆ ಓಡಿ ಬಂದ ಘಟನೆ ನಡೆದಿದೆ. ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ (OT) ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಆಸ್ಪತ್ರೆಯ ತುಂಬೆಲ್ಲಾ ದಟ್ಟ ಹೊಗೆ ಆವರಿಸುತ್ತಿದ್ದಂತೆ ರೋಗಿಗಳು ಮತ್ತು ಅವರ ಸಂಬಂಧಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಪ್ಪಿದ ಭಾರಿ … Continue reading ಸರ್ಕಾರಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!