July 23, 2026
Thursday, July 23, 2026
spot_img

ಬೆಂಗಳೂರಿನ ಗರುಡ ಮಾಲ್ ಸಮೀಪ ಭೀಕರ ಅ*ಗ್ನಿ ಅವಘಡ: ರಾಯಲ್ ಹೆರಿಟೇಜ್ ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರಿನ ಅಶೋಕ್ ನಗರದ ಗರುಡ ಮಾಲ್ ಸಮೀಪವಿರುವ ‘ರಾಯಲ್ ಹೆರಿಟೇಜ್’ ಅಪಾರ್ಟ್‌ಮೆಂಟ್‌ನ ಫ್ಲಾಟ್‌ ಒಂದರಲ್ಲಿ ಇಂದು ಮಧ್ಯಾಹ್ನ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡವೇ ಹೊತ್ತಿ ಉರಿದಿದೆ. ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

 ಧಗಧಗನೆ ಹೊತ್ತಿ ಉರಿದ ಫ್ಲಾಟ್

ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗರುಡ ಮಾಲ್ ಹಾಗೂ ಬ್ರಿಗೇಡ್ ರಸ್ತೆ ಸಮೀಪವಿರುವ ‘ರಾಯಲ್ ಹೆರಿಟೇಜ್‌’ ಅಪಾರ್ಟ್‌ಮೆಂಟ್‌ನ ಫ್ಲಾಟ್‌ವೊಂದರಲ್ಲಿ ಇಂದು ಮಧ್ಯಾಹ್ನ ಸುಮಾರು 3:30ರ ಹೊತ್ತಿಗೆ ಈ ಅವಘಡ ಸಂಭವಿಸಿದೆ. ‌ಮೊಹಮ್ಮದ್ ತಸ್ಲೀಮ್ ಎಂಬುವವರಿಗೆ ಸೇರಿದ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ಮೂರು ಸಿಲಿಂಡರ್‌ಗಳಿದ್ದವು ಎನ್ನಲಾಗಿದೆ. ಈ ಪೈಕಿ ಒಂದು ಸಿಲಿಂಡರ್ ಭೀಕರವಾಗಿ ಸ್ಫೋಟಗೊಂಡಿದ್ದರಿಂದ ಬೆಂಕಿ ಇಡೀ ಕಟ್ಟಡಕ್ಕೆ ಕ್ಷಣಾರ್ಧದಲ್ಲಿ ವ್ಯಾಪಿಸಿದೆ.

ಅಗ್ನಿ ದುರಂತದ ತೀವ್ರತೆಗೆ ಫ್ಲಾಟ್‌ನಲ್ಲಿದ್ದ ರೆಫ್ರಿಜರೇಟರ್ (ಫ್ರಿಡ್ಜ್), ವಾಷಿಂಗ್ ಮೆಷಿನ್ ಹಾಗೂ ಜಿಮ್ ಪರಿಕರಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.  

ಅದೃಷ್ಟವಶಾತ್ ತಪ್ಪಿದ ಅಪಾಯ!

ಮನೆಯೊಳಗೆ ಹೊಗೆ ಮತ್ತು ಸಣ್ಣದಾಗಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಫ್ಲಾಟ್‌ನಲ್ಲಿದ್ದ ಕುಟುಂಬಸ್ಥರು ಎಚ್ಚೆತ್ತುಕೊಂಡಿದ್ದಾರೆ. ಹೀಗಾಗಿ ಒಂದೇ ಫ್ಲಾಟ್‌ನಲ್ಲಿದ್ದ ಐದೂ ಜನ ತಕ್ಷಣವೇ ಹೊರಗೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಇದನ್ನೂ ಓದಿ;

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ

ಮಾಹಿತಿ ತಿಳಿಯುತ್ತಿದ್ದಂತೆಯೇ ಎರಡು ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ದಟ್ಟವಾದ ಹೊಗೆ ಮತ್ತು ಜ್ವಾಲೆಯ ನಡುವೆಯೂ ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ರಸ್ತೆ ಬದಿಯ ಪ್ರಮುಖ ವಾಣಿಜ್ಯ ಪ್ರದೇಶದಲ್ಲೇ ಈ ಅವಘಡ ಸಂಭವಿಸಿದ್ದರಿಂದ ಸುತ್ತಮುತ್ತಲಿನ ನಿವಾಸಿಗಳು ಹಾಗೂ ಸಾರ್ವಜನಿಕರಲ್ಲಿ ಕೆಲಕಾಲ ಭಾರಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !