ಕ್ಯಾಲಿಫೋರ್ನಿಯಾ ಕಾಡುಗಳಲ್ಲಿ ಭೀಕರ ಬೆಂಕಿ: ತುರ್ತು ಪರಿಸ್ಥಿತಿ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಯೊಸೆಮೈಟ್ ರಾಷ್ಟ್ರೀಯ ಉದ್ಯಾನದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿಕ್ಯಾಲಿಫೋರ್ನಿಯಾ ಗವರ್ನರ್ ಗೇವಿನ್ ನ್ಯೂಸಮ್ ಮಾರಿಪೋಸಾ ಕೌಂಟಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಗವರ್ನರ್ ಕಚೇರಿ, ‘ಗವರ್ನರ್ ಗೇವಿನ್ ನ್ಯೂಸಮ್ ಇಂದು ಮಾರಿಪೋಸಾ ಕೌಂಟಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಓಕ್ ಕಾಡುಗಳಲ್ಲಿ ಭೀಕರ ಬೆಂಕಿಯಿಂದಾಗಿ ಮನೆಗಳು ಮತ್ತು ಇತರ ನಿರ್ಮಾಣ ಕಟ್ಟಡಗಳು ಅಪಾಯಕ್ಕೆ ಸಿಲುಕಿವೆ. ಈ ಹಿನ್ನೆಲೆಯಲ್ಲಿ 3 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿ ರಾಜ್ಯಪಾಲರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಓಕ್ ಕಾಡುಗಳಲ್ಲಿನ ಬೆಂಕಿ ಅನಾಹುತ 11 ಸಾವಿರ 500 ಎಕರೆಗೂ ಹೆಚ್ಚು ಪ್ರದೇಶವನ್ನು ಸುಟ್ಟುಹಾಕಿದೆ. ಮಾರಿಪೋಸಾ ಕೌಂಟಿಯ ಮಿಡ್‌ಪೈನ್ಸ್ ಪಟ್ಟಣದ ಬಳಿ ಶುಕ್ರವಾರ ಮಧ್ಯಾಹ್ನದ ಬಳಿಕ ವ್ಯಾಪಕವಾಗಿ ಹರಡಿದೆ.

ಮಾಧ್ಯಮಗಳಲ್ಲಿನ ವರದಿಗಳ ಪ್ರಕಾರ, ಈ ಭಾರಿ ಬೆಂಕಿಯಿಂದಾಗಿ, ಸ್ಥಳೀಯ ವ್ಯಾಪಾರ ಕೇಂದ್ರಗಳು ಮತ್ತು ಮನೆಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!