ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು: ಸುಟ್ಟು ಭಸ್ಮವಾದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಪುತ್ರನ ಮನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಾಸ್‌ ಏಂಜಲೀಸ್‌ನಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚಿನಲ್ಲಿ ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ ಅವರ ಪುತ್ರ ಹಂಟರ್‌ ಬೈಡನ್‌ ಅವರ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಕ್ಯಾಲಿಫೋರ್ನಿಯಾದ (California) ಮಾಲಿಬು ನಗರದಲ್ಲಿರುವ ಹಂಟರ್‌ ಬೈಡನ್‌ ಅವರ ಮನೆ ಸುಟ್ಟು ಭಸ್ಮವಾಗಿದೆ.

ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹರಿದಾಡುತ್ತಿದ್ದು, 1950ರ ಸಂದರ್ಭದಲ್ಲಿ 15,800 ಡಾಲರ್‌ (13.56 ಲಕ್ಷ ರೂ.) ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಪೆಸಿಫಿಕ್ ಪಾಲಿಸೇಡ್ಸ್ ಪ್ರದೇಶದ ಆಕರ್ಷಣೆಯಾಗಿದ್ದ ಈ ಮನೆ 3 ಬೆಡ್‌ರೂಮ್‌, ಮೂರು ಬಾತ್‌ ರೂಮ್‌, 1 ಐಷಾರಾಮಿ ಗೌರ್ಮೆಟ್ ಅಡುಗೆಮನೆಯನ್ನು ಒಳಗೊಂಡಿತ್ತು. ಪೆಸಿಫಿಕ್‌ ಸಾಗರ ವೀಕ್ಷಣೆಗೆ ವಿಶೇಷ ಬಾಲ್ಕನಿಯನ್ನೂ ಈ ಮನೆ ಒಳಗೊಂಡಿತ್ತು. ಇದೀಗ ಕಾಡ್ಗಿಚ್ಚಿನಿಂದ ಸುಟ್ಟು ಭಸ್ಮವಾಗಿದೆ.

1 ಲಕ್ಷ ಜನರ ಸ್ಥಳಾಂತರ:
ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಹೊತ್ತಿಕೊಂಡಿರುವ ಭೀಕರ ಕಾಡ್ಗಿಚ್ಚು ಅಪಾರ ಹಾನಿಯುಂಟುಮಾಡಿದೆ. ಮುಗಿಲೆತ್ತರಕ್ಕೆ ಚಿಮ್ಮುತ್ತಿರುವ ಜ್ವಾಲೆ ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್‌ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ರಕ್ಷಣಾ ಸಿಬ್ಬಂದಿ ಚಾಲನೆ ನೀಡಿದ್ದಾರೆ. ದುರ್ಘಟನೆಯಲ್ಲಿ ಈವರೆಗೆ ಐವರು ಸಜೀವ ದಹನವಾಗಿದ್ದಾರೆ. ಈ ನಡುವೆ 1,00,000 ಜನರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಸುಮಾರು 2,000 ಮನೆಗಳು ಸುಟ್ಟು ಭಸ್ಮವಾಗಿವೆ ಎಂದು ವರದಿಗಳು ತಿಳಿಸಿವೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!