ಹೊಸದಿಗಂತ ವರದಿ ಕಲಬುರಗಿ:
ಹಾಡುಹಗಲೇ ಗ್ರಾಮ ಪಂಚಾಯತ್ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಶುಕ್ರವಾರ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪೂರ್ದಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ಚೌಡಾಪೂರಿನ ಮದರಾ ಬಿ ಗ್ರಾಮ ಪಂಚಾಯತ್ ಅಧ್ಯಕ್ಷ ಗೌಡಪ್ಪಗೌಡ ಪಾಟೀಲ್ 50,ಎಂಬಾನನ್ನೆ ದುಷ್ಕರ್ಮಿಗಳು ತಲ ವಾರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿದ್ದಾರೆ.
ಇನ್ನೂ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು,ಭೀಮಾ ತೀರದಲ್ಲಿ ಸೇಡಿನ ಜ್ವಾಲೆ ಮತ್ತೆ ಸ್ಫೋಟ ಗೊಂಡಿದೆ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
ದೇವಲಗಾಣಗಾಪುರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.