ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಹೊರ ವಲಯದ ಘಟಂಪುರದಲ್ಲಿ ಶನಿವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಕ್ತರು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಹೊಂಡಕ್ಕೆ ಬಿದ್ದು 10 ಮಂದಿ ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಸಾದ್ ಪಟ್ಟಣದ ಗೌಶಾಲಾ ಬಳಿ ಚಂದ್ರಿಕಾ ದೇವಿ ದೇವಸ್ಥಾನಕ್ಕೆ ಭೇಟಿ ಮರಳುತ್ತಿದ್ದ ಭಕ್ತರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿಯಾಗಿದೆ.
ಮಾಹಿತಿ ತಿಳಿದ ಪೊಲೀಸರು ಸ್ಥಳೀಯರೊಂದಿಗೆ ಸೇರಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.