ಭೀಕರ ರಸ್ತೆ ಅಪಘಾತ: ನಾಲ್ವರ ದಾರುಣ ಸಾವು, ಗಂಭೀರ ಸ್ಥಿತಿಯಲ್ಲಿ ನಾಲ್ವರು ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣದ ಕೊಂಡಗಟ್ಟು ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವು ಹಿಂತಿರುಗುತ್ತಿದ್ದಾಗ ಅಡ್ಡಂಕಿ-ನಾರ್ಕಟ್‌ಪಲ್ಲಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ, ಪ್ರಯಾಣಿಕರು ತಮ್ಮ ಹೊಸ ಕಾರಿಗೆ ಪೂಜೆ ಸಲ್ಲಿಸಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಂಡಗಟ್ಟು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ಸ್ವಗ್ರಾಮವಾದ ಸಿರಿಪುರಕ್ಕೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪಿಡುಗುರಳ್ಳ ಗ್ರಾಮಾಂತರ ಠಾಣೆ ಸಬ್ ಇನ್ಸ್‌ಪೆಕ್ಟರ್ ಮೋಹನ್ ತಿಳಿಸಿದ್ದಾರೆ.

ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!