ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಆಟೋಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದ್ದು, ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಖಿಸರಾಯ್‌ನಿಂದ ಸಿಕಂದ್ರ ಕಡೆಗೆ ಹೊರಟಿದ್ದ ಆಟೋದಲ್ಲಿ 15 ಮಂದಿ ಇದ್ದರು. ವಾಹನ ಗುದ್ದಿದ ರಭಸಕ್ಕೆ ಆಟೋ ಜಖಂ ಆಗಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಟೋ ಚಾಲಕ ಮನೋಜ್ ಕುಮಾರ್ ಸೇರಿ ಒಂಬತ್ತು ಮಂದಿ ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಆಗಮಿಸಿದ್ದು, ಯಾವ ವಾಹನ ಡಿಕ್ಕಿ ಹೊಡೆದಿದೆ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.