ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: ಹತ್ತು ಮಂದಿ ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಛತ್ತೀಸ್‌ಗಢದ ಬೆಮೆತಾರಾದಲ್ಲಿ ಭಾನುವಾರ ತಡರಾತ್ರಿ ಭಾರೀ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ 9 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 23 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಮೆತಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಥಿಯಾ ಪೆಟ್ರೋಲ್ ಪಂಪ್ ಬಳಿ ಜನರು ತುಂಬಿದ್ದ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪಿಕಪ್‌ನಲ್ಲಿದ್ದ ಎಲ್ಲರೂ ಕುಟುಂಬದ ಕಾರ್ಯಕ್ರಮಕ್ಕೆಂದು ಗ್ರಾಮದ ತಿರಯ್ಯಗೆ ತೆರಳಿ ಬಳಿಕ ಪಾರ್ಥರ ಗ್ರಾಮಕ್ಕೆ ಮರಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ ಗಾಯಗೊಂಡವರಲ್ಲಿ ಕೆಲವರನ್ನು ರಾಯ್‌ಪುರದ ಏಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಉಳಿದ ಗಾಯಾಳುಗಳಿಗೆ ಬೆಮೆತ್ರಾ ಮತ್ತು ಸಿಮ್ಗಾದ ಸಿಎಚ್‌ಸಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!