ACCIDENT | ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಐವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ.

ಅಮನ್‌ಪುರದ ಎನ್‌ಎಚ್‌ 35ರಲ್ಲಿ ವೇಗವಾಗಿ ಬಂದ ಟ್ರಕ್‌ ಇ- ರಿಕ್ಷಾಗೆ ಡಿಕ್ಕಿ ಹೊಡೆದಿದ್ದು, ರಿಕ್ಷಾದಲ್ಲಿದ್ದವರು ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!