September 17, 2026
Thursday, September 17, 2026
spot_img

ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ, ಇಬ್ಬರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರು ತಾಲೂಕಿನ ಸೋರೆಕುಂಟೆ ಬಳಿ ಲಾರಿಯೊಂದಕ್ಕೆ ಹಿಂಬದಿಯಿಂದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರಿನಿಂದ ಚಿತ್ರದುರ್ಗದತ್ತ ಟ್ರ್ಯಾಕ್ಟರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಸೋರೆಕುಂಟೆ ಮಾರ್ಗವಾಗಿ ತೆರಳುತ್ತಿತ್ತು. ಇದೇ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಇಬ್ಬರ ಸಾವು

ಡಿಕ್ಕಿಯ ತೀವ್ರತೆಗೆ ಬೊಲೆರೋ ಗೂಡ್ಸ್ ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ. ವಾಹನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ ಷಣ್ಮುಗ (50) ಎಂಬುವವರ ಗುರುತು ಪತ್ತೆಯಾಗಿದ್ದು, ಅವರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಬ್ಬ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ:

ಸ್ಥಳಕ್ಕೆ ಪೊಲೀಸರ ಭೇಟಿ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಕೋರಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಪ್ರಕರಣ ದಾಖಲು

ಘಟನೆಗೆ ಸಂಬಂಧಿಸಿದಂತೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !