July 21, 2026
Tuesday, July 21, 2026
spot_img

ಮಂತ್ರಾಲಯದಲ್ಲಿ ಭೀಕರ ರಸ್ತೆ ಅಪಘಾತ: ಹಾಫ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃ*ತ್ಯು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಫ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ (೪೩) ಸಾವನ್ನಪ್ಪಿದ್ದಾರೆ.

ಈ ಘಟನೆಯಲ್ಲಿ ಇತರೆ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಮಂಗಳೂರಿನ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ, ಸಿಎ ಸುಧೇಶ್ ರೈ ಎಂದು ಗುರುತಿಸಲಾಗಿದೆ. ಸ್ಥಳೀಯರ ಸಹಕಾರದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿ ಶೆಟ್ಟಿ ಅವರು ಈ ಮೂವರೊಂದಿಗೆ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ದರುಶನಕ್ಕೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

ಇದನ್ನೂ ಓದಿ:



ರವಿ ಶೆಟ್ಟಿ ಅವರು ಯಕ್ಷಧ್ರುವ ಪಟ್ಲ ಇದರ ಜೊತೆ ಕಾರ್ಯದರ್ಶಿ, ಉರ್ವ ಬಂಟರ ಸಂಘದ ಅಧ್ಯಕ್ಷರಾಗಿ, ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಆಗಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !