ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಕಾರ್ ಹಾಗೂ ಕಂಟೇನರ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಬೆಳಗಾವಿಯಲ್ಲಿ ವಿಶ್ವ ಹಿಂದೂ ಪರಿಷತ್-ಭಜರಂಗದ ಆಶ್ರಯದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸ್ವಾಮೀಜಿ ಬೆಳಗಾವಿಗೆ ತೆರಳಿದ್ದರು.
ಬೆಳಗಾವಿಗೆ ಬರುವಾಗ ಅಪಘಾತ ಸಂಭವಿಸಿದ್ದು, ಸ್ವಾಮೀಜಿಯ ಇಬ್ಬರು ಸೇವಕರು ಮೃತಪಟ್ಟಿದ್ದಾರೆ.