ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೇವರ್ಗಿ ತಾಲೂಕಿನ ಹಸನಾಪುರ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ.
ಬೈಕ್, ಕಾರು, ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ರಾಘವೇಂದ್ರ (35), ಮುಜಾಹಿದ್ (30), ಹುಸೇನ್ (45) ಮೃತರು. ಕಾರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ತೆರಳುತ್ತಿತ್ತು. ಬೈಕ್‌ನಲ್ಲಿದ್ದ ಪರಮಾನಂದ ಎಂಬುವರಿಗೆ ಮತ್ತು ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ನಾಲ್ವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ನಡೆದ ಸ್ಥಳಕ್ಕೆ ಕಲಬುರಗಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.