ಮೇರಿಲ್ಯಾಂಡ್‌ನಲ್ಲಿ ಭಯಾನಕ ಹಡಗು ದುರಂತ: ನೋಡ ನೋಡುತ್ತಲೇ ಕುಸಿದು ಬಿದ್ದ ಸೇತುವೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ಅತಿ ಉದ್ದದ ಸೇತುವೆ, ಬಾಲ್ಟಿಮೋರ್‌ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಸೇತುವೆಗೆ ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಸೇತುವೆ ಕುಸಿದು ಬಿದ್ದಿದೆ. ಸೇತುವೆ ಕುಸಿದು ಹಲವು ವಾಹನಗಳು ನೀರಿಗೆ ಬೀಳುವ ಮುನ್ನ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ಸೇತುವೆ ಕುಸಿದ ಸಂದರ್ಭದಲ್ಲಿ ಸೇತುವೆಯ ಮೇಲೆ ಸುಮಾರು ಏಳು ಮಂದಿ ಕಟ್ಟಡ ಕಾರ್ಮಿಕರು ಮತ್ತು ಮೂರ್ನಾಲ್ಕು ನಾಗರಿಕ ವಾಹನಗಳು ಇದ್ದವು ಎಂದು ವರದಿಯಾಗಿದೆ. ಘಟನೆಯ ನಂತರ ಸೇತುವೆಯನ್ನು ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಸುರಕ್ಷತೆಯ ಕಾರಣಗಳಿಗಾಗಿ, ಅಧಿಕಾರಿಗಳು ಎರಡೂ ದಿಕ್ಕುಗಳಲ್ಲಿ ಎಲ್ಲಾ ಲೇನ್‌ಗಳನ್ನು ಮುಚ್ಚಿದ್ದಾರೆ ಎನ್ನಲಾಗಿದೆ.

ಸೇತುವೆಗೆ ಡಿಕ್ಕಿ ಹೊಡೆದ ಹಡಗು ಕಂಟೈನರ್ ಹಡಗು ಎಂದು ವರದಿಯಾಗಿದೆ. ಡಾಲಿ ಎಂದು ಕರೆಯಲ್ಪಡುವ ಈ ಹಡಗು ಬಾಲ್ಟಿಮೋರ್‌ನಿಂದ ಶ್ರೀಲಂಕಾದ ರಾಜಧಾನಿ ಕೊಲಂಬೊಗೆ ಪ್ರಯಾಣಿಸುತ್ತಿತ್ತು. ರಾತ್ರಿ 1:30ರ ಸುಮಾರಿಗೆ ಹಡಗು ಸೇತುವೆಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಇದರ ನಂತರ ಹಡಗು ನೀರಿನಲ್ಲಿ ಮುಳುಗಿ ಸೇತುವೆಯೂ ಮುರಿದು ನದಿಗೆ ಬಿದ್ದಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!