ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಜಲ್‌ಪೈಗುರಿಯಲ್ಲಿ ಭಾರೀ ಬಿರುಗಾಳಿ ಬೀಸುತ್ತಿದ್ದು, ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಬಿರುಗಾಳಿಯಿಂದಾಗಿ ಮನೆಗಳು ಹಾಗೂ ಮರಗಳು ನೆಲಕ್ಕೆ ಬಿದ್ದಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಜಲ್‌ಪೈಗುರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದು, ಸಿಎಂ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಧಿಕಾರಿಗಳು ಅಲರ್ಟ್ ಆಗಿದ್ದು, ಎಲ್ಲ ರೀತಿಯ ನೆರವುಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಜಲ್‌ಪೈಗುರಿ-ಮೈನಗುರಿ ಪ್ರದೇಶಗಳಲ್ಲಿ ಬಿರುಗಾಳಿಯಿಂದ ಹಾನಿಗೊಳಗಾಗಿರುವುದನ್ನು ಕೇಳಿ ಬೇಸರವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಅಧಿಕಾರಿಗಳೊಂದಿಗೆ ಮಾತನಾಡಿ, ಅತಿವೃಷ್ಟಿಯಿಂದ ಹಾನಿಗೊಳಗಾದವರಿಗೆ ಸೂಕ್ತ ನೆರವು ನೀಡುವಂತೆ ತಿಳಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.