October 9, 2026
Friday, October 9, 2026
spot_img

ಪೆರುವಿನಲ್ಲಿ ಭೀಕರ ದುರಂತ; ಟೇಕ್‌ಆಫ್ ಆದ ಕೆಲವೇ ಕ್ಷಣದಲ್ಲಿ ವಿಮಾನ ಪತನ: 13 ಮಂದಿ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೆರುವಿನಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದ್ದು, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನ ಪತನಗೊಂಡ ಪರಿಣಾಮ 13 ಮಂದಿ ಮೃತಪಟ್ಟಿದ್ದಾರೆ. ಘಟನೆ ದೇಶದ ನಾಜ್ಕಾ ಪ್ರದೇಶದ ಸಮೀಪ ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ರಾಜಧಾನಿ ಲಿಮಾದಿಂದ ದಕ್ಷಿಣಕ್ಕೆ ಇರುವ ಪಿಸ್ಕೋ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ. ವಿಮಾನದಲ್ಲಿದ್ದ 11 ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆ ಆರಂಭಿಸಿದ ಅಧಿಕಾರಿಗಳು

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೆರುವಿನ ನಾಗರಿಕ ವಿಮಾನಯಾನ ಪ್ರಾಧಿಕಾರ ಪ್ರಕರಣದ ತನಿಖೆ ಆರಂಭಿಸಿದ್ದು, ಘಟನಾ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ:

ವಿದೇಶಿ ಪ್ರವಾಸಿಗರೇ ಹೆಚ್ಚು ಬಲಿ

ಮೃತರ ಪೈಕಿ 11 ಮಂದಿ ವಿದೇಶಿ ಪ್ರವಾಸಿಗರಾಗಿದ್ದಾರೆ. ಇವರಲ್ಲಿ ಏಳು ಮಂದಿ ಇಟಲಿ, ಇಬ್ಬರು ಜರ್ಮನಿ ಹಾಗೂ ಇಬ್ಬರು ಸ್ಪೇನ್ ದೇಶದ ನಾಗರಿಕರು ಸೇರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Must Read