October 17, 2026
Saturday, October 17, 2026
spot_img

BREAKING | ತಾವರೆಕೆರೆಯಲ್ಲಿ ಭೀಕರ ದುರಂತ: ಕ್ರಶರ್‌ನಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಮನಗರದ ತಾವರೆಕೆರೆಯ ಮಾದಪಟ್ಟಣ ಗ್ರಾಮದಲ್ಲಿ ಭೀಕರ ದುರಂತ ಸಂಭವಿಸಿದ್ದು, ಕ್ರಶರ್‌ ಬಂಡೆ ಮೇಲೆ ಕೆಲಸ ಮಾಡುತ್ತಿದ್ದ ವೇಳೆ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬಂಡೆಯ ಮೇಲಿನಿಂದ ಬಿದ್ದ ಏಳು ಕಾರ್ಮಿಕರು ಸ್ಥಳದಲ್ಲಿಯೇ ಉಸಿರುಚೆಲ್ಲಿದ್ದು, ಬಂಡೆಯ ಅಡಿಗೂ ಏಳು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ 4 ಮೃತದೇಹ ಹೊರ ತೆಗೆಯಲಾಗಿದೆ.

ಕಾವೇರಿ ಕಂಪನಿಗೆ ಸೇರಿದ ಕ್ರಶಸರ್‌ನಲ್ಲಿ ದುರಂತ ಸಂಭವಿಸಿದೆ. ಕಾರ್ಮಿಕರು ಹಿಟಾಚಿಯಲ್ಲಿ ಕೆಲಸ ಮಾಡುವ ವೇಳೆ ಬಂಡೆ ಕುಸಿದು ಬಿದ್ದಿದೆ. ಕಾರ್ಮಿಕರೂ ಕೂಡ ಕೆಳಕ್ಕೆ ಬಿದ್ದಿದ್ದಾರೆ.ಸ್ಥಳಕ್ಕೆ ತಾವರೆಕೆರೆ ಪೊಲೀಸ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read