April 10, 2026
Friday, April 10, 2026
spot_img

ಯಮುನಾ ನದಿಯಲ್ಲಿ ಭೀಕರ ದುರಂತ: ಪ್ರವಾಸಿಗರ ದೋಣಿ ಮುಳುಗಿ ಆರು ಮಂದಿ ಸಾ*ವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಥುರಾದಲ್ಲಿ ಭೀಕರ ದುರಂತ ಸಂಭವಿಸಿದ್ದು, ಯಮುನಾ ನದಿಯಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿ ಕನಿಷ್ಠ ಆರು ಜನ ಮೃತಪಟ್ಟ ಘಟನೆ ನಡೆದಿದೆ.

ದೋಣಿ ನದಿಯ ಮಧ್ಯ ಭಾಗದಲ್ಲಿದ್ದ ವೇಳೆ ಬಿರುಗಾಳಿಯಿಂದಾಗಿ ತೂಗಾಡಲು ಪ್ರಾರಂಭಿಸಿದ್ದು, ಸೇತುವೆಗೆ ಡಿಕ್ಕಿ ಹೊಡೆದು ಮುಳುಗಿದೆ.

ಈಗಾಗಲೇ ಆರು ಜನರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸುಮಾರು 15 ಜನರನ್ನು ರಕ್ಷಿಸಲಾಗಿದೆ. ಉಳಿದವರ ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಅವರು ತಿಳಿಸಿದ್ದಾರೆ.

ದೋಣಿಯಲ್ಲಿ ಎರಡು ಡಜನ್‌ಗೂ ಹೆಚ್ಚು ಪ್ರವಾಸಿಗರಿದ್ದರು ಎಂದು ಹೇಳಲಾಗಿದ್ದು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಸಹಿತ ಸ್ಥಳೀಯರು ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !