ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ, ಎಕ್ಸ್‌ಪ್ರೆಸ್‌ ರೈಲಿಗೆ ಹಿಂಬದಿಯಿಂದ ಗುದ್ದಿದ ಗೂಡ್ಸ್‌ ರೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಐದು ಮಂದಿ ಮೃತಪಟ್ಟಿದ್ದಾರೆ.

25 ಮಂದಿ ಪ್ರಯಾಣಿಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದಾಗ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!