ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಯೋತ್ಪಾದಕ ಬೆದರಿಕೆಯ ಕುರಿತು ಕೇಂದ್ರ ಅಧಿಕಾರಿಗಳು ಎಚ್ಚರಿಕೆ ನೀಡಿದ ನಂತರ ಮುಂಬೈನ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಮುಂಬೈನ ಹಲವು ಧಾರ್ಮಿಕ ಸ್ಥಳಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ “ಮಾಕ್ ಡ್ರಿಲ್” ನಡೆಸಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರಗಳ ಡಿಸಿಪಿಗಳು ತಮ್ಮ ವಲಯಗಳಲ್ಲಿನ ಭದ್ರತಾ ಕ್ರಮಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಕೇಳಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ದೇವಸ್ಥಾನಗಳಲ್ಲಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.