September 15, 2026
Tuesday, September 15, 2026
spot_img

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಮಿಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ವಲಸೆ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಮೃತ ಕಾರ್ಮಿಕನನ್ನ ಭೂಪಿಂದರ್ ಕುಮಾರ್ ಎಂದು ಗುರುತಿಸಲಾಗಿದೆ. ಕೆಲ್ಲಂ ಪ್ರದೇಶದಲ್ಲಿ ಅಪರಿಚಿತ ಉಗ್ರರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇದೇ ದಾಳಿಯಲ್ಲಿ ಗಾಯಗೊಂಡಿದ್ದ ದೀಪಕ್ ಎಂಬ ಮತ್ತೊಬ್ಬ ಕಾರ್ಮಿಕ ನಿನ್ನೆ ಮೃತಪಟ್ಟಿದ್ದರು.

ಪೊಲೀಸರ ಮಾಹಿತಿ ಪ್ರಕಾರ, ದಾಳಿಯ ವೇಳೆ ಕಾರ್ಮಿಕರು ಕೆಲ್ಲಂನಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದರು. ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಎಸ್ಕೇಪ್‌ ಆಗಿದ್ದಾರೆ.ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆಯ ಅಂಗಸಂಸ್ಥೆಯೆಂದು ಪರಿಗಣಿಸಲ್ಪಡುವ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಘಟನೆಯ ಬಳಿಕ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದು, ಉಗ್ರರ ಪತ್ತೆಗೆ ವ್ಯಾಪಕ ಶೋಧ ಆರಂಭಿಸಿವೆ. ಮತ್ತೋರ್ವ ಗಾಯಾಳುಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !