ಮಾಸ್ಕೋದಲ್ಲಿ ಟೆರರ್‌ ಅಟ್ಯಾಕ್‌: ಹೇಯ ಕೃತ್ಯವನ್ನು ಖಂಡಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಷ್ಯಾದ ಮಾಸ್ಕೋದಲ್ಲಿ ಭಯೋತ್ಪಾದಕರ ಗನ್‌ ದಾಳಿಗೆ ೭೦ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಕಾಲ್ತುಳಿತಕ್ಕೆ ಒಳಗಾಗಿ ೧೪೫ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಭಯೋತ್ಪಾಧಕರ ನರಮೇಧವನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ. ರಷ್ಯಾ ಜನತೆಗೆ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆ ನೀಡಿದ್ದಾರೆ.

ಸದ್ಯ ಪ್ರಧಾನಿ ಮೋದಿ ಭೂತಾನ್‌ ಪ್ರವಾಸದಲ್ಲಿದ್ದಾರೆ. ಅಲ್ಲಿಂದಲೇ ಟ್ವೀಟ್‌ ಮೂಲಕ ಈ ದಾಳಿಯನ್ನು ಖಂಡಿಸಿದ್ದಾರೆ. ನಾವು ಎಂದಿಗೂ ಸಂತ್ರಸ್ತರ ಪರವಾಗಿ ಇದ್ದು ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ. ಇಂತಹ ದುಃಖದ ಸಮಯದಲ್ಲಿ ರಷ್ಯಾದ ಒಕ್ಕೂಟ ಸರ್ಕಾರ ಮತ್ತು ಅಲ್ಲಿನ ಜನರೊಂದಿಗೆ ಭಾರತ ಇರುತ್ತದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!