ಸ್ವಾತಂತ್ರ್ಯ ದಿನದಂದು ವಿಧ್ವಂಸಕ ಕೃತ್ಯ ನಡೆಸಲು ಸಂಚು: ಪಾಕ್‌ ಬೆಂಬಲಿತ ನಾಲ್ವರು ಉಗ್ರರು ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಸ್ವಾತಂತ್ರೋತ್ಸವ ಅಮೃತ ಮಹೋತ್ಸವದಂದು ವಿಧ್ವಾಂಸಕ ಕೃತ್ಯ ಎಸಗಲು ಯೋಜಿಸಿದ್ದ ಪಾಕಿಸ್ತಾನದ ಐಎಸ್‌ಐ ಬೆಂಬಲಿತ ನಾಲ್ವರು ಉಗ್ರರನ್ನು ಪಂಜಾಬ್‌ ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ ಮೂರು ಹ್ಯಾಂಡ್ ಗ್ರೆನೇಡ್‌ಗಳು, ಒಂದು ಐಇಡಿ (ಸುಧಾರಿತ ಸ್ಫೋಟಕ ಸಾಧನ), ಎರಡು ಪಿಸ್ತೂಲ್ ಮತ್ತು 40 ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಾಕ್-ಐಎಸ್‌ಐ ಬೆಂಬಲಿತ ಭಯೋತ್ಪಾದಕರಾದ ಕೆನಡಾ ಮೂಲದ ಅರ್ಶ್ ದಲ್ಲಾ ಮತ್ತು ಆಸ್ಟ್ರೇಲಿಯಾ ಮೂಲದ ಗುರ್ಜಂತ್ ಸಿಂಗ್‌ ಗ್ಯಾಂಗ್‌ ಗೆ ಸಂಬಂಧಿಸಿದ ನಾಲ್ವರು ಸದಸ್ಯರನ್ನು ಬಂಧಿಸಲಾಗಿದೆ. ಈ ಉಗ್ರರು ಸ್ವಾತಂತ್ರ್ಯೊತ್ಸವದಂದು ಉಗ್ರ ಕೃತ್ಯಕೆ ಸಂಚು ರೂಪಿಸಿದ್ದರು. ಪಂಜಾಬ್‌ನಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!