Sunday, August 14, 2022

Latest Posts

ಪತ್ನಿಗೆ ಭಯೋತ್ಪಾದಕರ ನಂಟು ಶಂಕೆ: ಪತಿ ದೂರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………..

ಹೊಸದಿಗಂತ ವರದಿ,ಮಂಗಳೂರು:

ಶ್ರೀಲಂಕಾದ ಮೂಲಕ ಭಾರತಕ್ಕೆ 12 ಮಂದಿ ಉಗ್ರರು ನುಸುಳಿದ್ದಾರೆ ಎಂಬ ಆತಂಕದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಘಾತಕಾರಿ ಅಂಶವೊಂದು ಹೊರಬಿದ್ದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ನೆರಿಯ ನಿವಾಸಿ ಚಿದಾನಂದ್ ಎಂಬವರು ತನ್ನ ಪತ್ನಿಗೆ ಭಯೋತ್ಪಾದಕರ ಜತೆ ಸಂಪರ್ಕ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೆರಿಯ ನಿವಾಸಿ ಚಿದಾನಂದ್ ತನ್ನ ಪತ್ನಿಯ ವಿರುದ್ಧ ದೂರು ನೀಡಿದವರು. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಮುಸ್ಲಿಂ ವ್ಯಕ್ತಿಯೊಬ್ಬ ಚಿದಾನಂದ್ ಅವರಿಗೆ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದ್ದು,ಈ ವಿಷಯವನ್ನು ಕೂಡ ಚಿದಾನಂದ್ ಪೊಲೀಸರಿಗೆ ತಿಳಿಸಿದ್ದಾರೆ.
ಚಿದಾನಂದ್ ಅವರು ತನ್ನ ಪತ್ನಿ ಆರ್. ರಾಜಿ ಎಂಬಾಕೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆಗೆ ದೂರು ನೀಡಿದ್ದು, ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss