ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ: ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಮೋದಿ ಮಾತು!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ,’ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ’ ಎಂದು ಒತ್ತಿ ಹೇಳಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಗಾಗಿ ಪ್ರಯತ್ನಗಳನ್ನು ಮಾಡುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಪಿಎಂ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ಸಂಭಾಷಣೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿರುವ ಅವರು, ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ ಎಂದಿದ್ದಾರೆ.

‘ಪ್ರಾದೇಶಿಕ ಉಲ್ಬಣವನ್ನು ತಡೆಗಟ್ಟಲು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಇದು ನಿರ್ಣಾಯಕವಾಗಿದೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ಪ್ರಯತ್ನಗಳನ್ನು ಬೆಂಬಲಿಸಲು ಭಾರತವು ಬದ್ಧವಾಗಿದೆ’ ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

 

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!