ಭಯೋತ್ಪಾದನೆಯನ್ನು ಯಾವುದೇ ಧರ್ಮದ ಜೊತೆ ಹೋಲಿಕೆ ಮಾಡಬಾರದು: ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಯೋತ್ಪಾದನೆಯ ಬೆದರಿಕೆಗಳನ್ನು ಯಾವುದೇ ಧರ್ಮ ಅಥವಾ ಗುಂಪಿಗೆ ಹೋಲಿಕೆ ಮಾಡಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ದೆಹಲಿಯ ಗೃಹ ಸಚಿವಾಲಯ ಆಯೋಜಿಸಿದ್ದ ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಕುರಿತ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು ಭಯೋತ್ಪಾದನೆಯ ಬೆದರಿಕೆಯನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಅಥವಾ ಗುಂಪಿಗೆ ಜೋಡಿಸಲು ಸಾಧ್ಯವಿಲ್ಲ ಮತ್ತು ಜೋಡಿಸಬಾರದು ಎಂದು ನಾವು ನಂಬುತ್ತೇವೆ ಎಂದು ಹೇಳಿದರು.

ತ್ಪಾದನೆಗೆ ಹಣಕಾಸು ಒದಗಿಸುವುದು ವಿಶ್ವದ ರಾಷ್ಟ್ರಗಳ ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ. ಭಯೋತ್ಪಾದನೆಯು ಜಾಗತಿಕ ಶಾಂತಿ ಮತ್ತು ಭದ್ರತೆಗೆ ಅತ್ಯಂತ ಗಂಭೀರ ಬೆದರಿಕೆಯಾಗಿದೆ ಮತ್ತು ಭಯೋತ್ಪಾದಕರನ್ನು ರಕ್ಷಿಸುವುದು ಭಯೋತ್ಪಾದನೆಯನ್ನು ಉತ್ತೇಜಿಸಿದಂತೆ ಎಂದರು.

ಹಿಂಸಚಾರ ನಡೆಸಲು, ಯುವಸಮೂಹವನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಿಕೊಳ್ಳೋದು ಹಾಗೂ ತಮ್ಮ ಆರ್ಥಿಕ ಸಂಪನ್ಮೂಲಗಳನ್ನು ಹೆಚ್ಚಿಸಿಕೊಳ್ಳಲು ಭಯೋತ್ಪಾದಕರು ನಿರಂತರವಾಗಿ ಹೊಸ – ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ತಮ್ಮ ಗುರುತನ್ನು ಮರೆಮಾಚಲು ಡಾರ್ಕ್‌ನೆಟ್‌ (DrakNet) ಬಳಸುತ್ತಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ಹೋರಾಡುವ ನಮ್ಮ ಸಾಮೂಹಿಕ ಸಂಕಲ್ಪವನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಕೆಲವು ದೇಶಗಳು ನಡೆಸುತ್ತಿವೆ. ಇದರ ಹೊರತಾಗಿಯೂ ಭಾರತ ಭಯೋತ್ಪಾದನೆ ನಿಗ್ರಹಿಸಲು ಆರ್ಥಿಕ ವ್ಯವಸ್ಥೆ ಹಾಗೂ ಕಾನೂನು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಗಮನಾರ್ಹ ಬೆಳವಣಿಗೆ ಸಾಧಿಸಿದೆ ಎಂದು ಶ್ಲಾಘಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!