ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ: ಖರ್ಗೆ ಮಾತು ವೈರಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ ಎಂದು ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಇದೀಗ ಭಾರೀ ವೈರಲ್ ಆಗುತ್ತಿದೆ.

ಕಥುವಾದಲ್ಲಿ ಮಾತನಾಡುತ್ತಿದ್ದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದರು. ಬಳಿಕ ಸುಧಾರಿಸಿಕೊಂಡು ಮಾತನಾಡಲು ಶುರು ಮಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ ಎಂದು ಹೇಳಿದ್ದು ಈ ಹೇಳಿಕೆ ಸದ್ಯ ವೈರಲ್ ಆಗಿದೆ.

https://x.com/BesuraTaansane/status/1840320047408988535?ref_src=twsrc%5Etfw%7Ctwcamp%5Etweetembed%7Ctwterm%5E1840320047408988535%7Ctwgr%5E048b51541112a7cb99443981cf12ed2097921803%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2024%2FSep%2F29%2Fcongress-will-come-to-power-terrorism-will-be-increase-mallikarjun-kharge-statement-viral

ಭಾಷಣ ವೇಳೆ ಅಸ್ವಸ್ಥರಾದ ಮಲ್ಲಿಕಾರ್ಜುನ ಖರ್ಗೆ ಅವರು ನಂತರ ಸುಧಾರಿಸಿಕೊಂಡು ಮತ್ತೆ ಭಾಷಣ ಮಾಡಲು ಶುರು ಮಾಡಿದರು. ಆದರೆ ಭಾಷಣದ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಳವಾಗುತ್ತದೆ ಎಂದು ಹೇಳಿದ್ದರು. ಇದು ತಾಯ್ತಪ್ಪಿನಿಂದ ಹೇಳಿದ್ರಾ? ಉದ್ದೇಶಪೂರ್ವಕವಾಗಿ ಹೇಳಿದ್ರಾ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ದೌರ್ಬಲ್ಯದ ಕ್ಷಣದಲ್ಲಿ ಸತ್ಯ ಹೊರಬರುತ್ತದೆ ಎಂದು ಕೆಲವರು ಕಮೆಂಟ್ ಮಾಡುತ್ತಿದ್ದರೆ ಮತ್ತೆ ಕೆಲವರು ಸತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಟ್ವೀಟಿಸುತ್ತಿದ್ದಾರೆ.

 

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!