ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ನಾನು ಈ ಪ್ರದೇಶದ ಎಲ್ಲಾ ಹುತಾತ್ಮರನ್ನು ಸ್ಮರಿಸುತ್ತೇನೆ. ಭಯೋತ್ಪಾದನೆ ಮತ್ತೆ ತಲೆ ಎತ್ತದಂತೆ ನಾವು ಕೊನೆಗೊಳಿಸುತ್ತೇವೆ ಎಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭರವಸೆ ನೀಡುತ್ತೇನೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಹೇಳಿದ್ದಾರೆ .
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ (ಮೊದಲ ಹಂತದ ಪ್ರಚಾರದ ಕೊನೆಯ ದಿನವಾದ ಸೋಮವಾರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ರಾಹುಲ್ ಗಾಂಧಿ ) ಈ ಪ್ರದೇಶವನ್ನು ಮತ್ತೆ ಭಯೋತ್ಪಾದನೆಗೆ ತಳ್ಳುವ ಉದ್ದೇಶ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ (NC) ಭಯೋತ್ಪಾದನೆಯ ಬಗ್ಗೆ ಮೃದುವಾಗಿದೆ. ಅವರ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಅವರು ಭಯೋತ್ಪಾದಕರು ಮತ್ತು ಕಲ್ಲು ತೂರಾಟಗಾರರನ್ನು ಜೈಲಿನಿಂದ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಪದೇ ಪದೇ ಹೇಳಿಕೊಂಡಿದ್ದಾರೆ.ಜೊತೆಗೆ ಈ ಭಯೋತ್ಪಾದಕರನ್ನು ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿವೆ. ಆದರೆ (ಪ್ರಧಾನಿ) ನರೇಂದ್ರ ಮೋದಿಯವರ ಸರ್ಕಾರ (ಕೇಂದ್ರದಲ್ಲಿ) ಇರುವವರೆಗೆ, ಯಾರೂ ಭಾರತದ ನೆಲದಲ್ಲಿ ಭಯೋತ್ಪಾದನೆಯನ್ನು ಹರಡಲು ಧೈರ್ಯ ಮಾಡುವುದಿಲ್ಲ ಎಂದು ನಾನು ಇಂದು ನಿಮಗೆ ಭರವಸೆ ನೀಡುತ್ತೇನೆ ಎಂದು ಕಿಶ್ತ್ವಾರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಶಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ‘ವಿಶೇಷ ಸ್ಥಾನಮಾನ’ ನೀಡಿದ ಮತ್ತು 2019 ರ ಆಗಸ್ಟ್‌ನಲ್ಲಿ ಬಿಜೆಪಿ ನೇತೃತ್ವದ ಕೇಂದ್ರವು ರದ್ದುಪಡಿಸಿದ 370 ನೇ ವಿಧಿಯು ‘ಇತಿಹಾಸ’ ಎಂದು ಶಾ ಪುನರುಚ್ಚರಿಸಿದರು.
90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ನವೆಂಬರ್-ಡಿಸೆಂಬರ್ 2014 ರ ನಂತರ ಮೊದಲ ಚುನಾವಣೆ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ನಡೆಯಲಿದೆ. ಮತಗಳ ಎಣಿಕೆ ಅಕ್ಟೋಬರ್ 8 ರಂದು ನಡೆಯಲಿದೆ.