Wednesday, November 30, 2022

Latest Posts

ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ, ಇಬ್ಬರು ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಉಗ್ರರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಬಿಹಾರ ಮೂಲದ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅನಂತ್‌ನಾಗ್ ಜಿಲ್ಲೆಯ ಬೋಂಡಿಯಾಲ್ಗಾಮ್‌ನ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಉದ್ದೇಶಿತ ದಾಳಿ ಇದಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ. ಉಗ್ರರು ಕಾರ್ಮಿಕರನ್ನು ಕಟ್ಟಡದಿಂದ ಹೊರಬರುವಂತೆ ಕರೆದಿದ್ದಾರೆ. ಕಾರಣ ತಿಳಿಯದ ಕಾರ್ಮಿಕರು ಕಟ್ಟಡದಿಂದ ಹೊರಬಂದಂತೆ ಉಗ್ರರು ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾರೆ ಎಂದು ಕಾಶ್ಮೀರದ ಎಡಿಜಿಪಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!