August 3, 2026
Monday, August 3, 2026
spot_img

ಈಶಾನ್ಯದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಅಸ್ಸಾಂ ರೈಫಲ್ಸ್ ವಾಹನದ ಮೇಲೆ ದಾಳಿ, ಯೋಧ ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಗಾಲ್ಯಾಂಡ್‌ನಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಡೆದ ಶಂಕಿತ ಐಇಡಿ (IED) ಸ್ಫೋಟದಲ್ಲಿ ಅಸ್ಸಾಂ ರೈಫಲ್ಸ್‌ನ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನೆ ಬಳಿಕ ಪ್ರದೇಶದಲ್ಲಿ ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಹೇಗೆ ನಡೆದಿದೆ ದಾಳಿ?

ಸುಖೋವಿ ಸಮೀಪ ಗಸ್ತು ಕರ್ತವ್ಯದಲ್ಲಿದ್ದ ಅಸ್ಸಾಂ ರೈಫಲ್ಸ್ ವಾಹನದ ಬಳಿ ಶಂಕಿತ ಸ್ಫೋಟಕ ಸಿಡಿದಿದೆ. ಸ್ಫೋಟದ ತೀವ್ರತೆಗೆ ವಾಹನದಲ್ಲಿದ್ದ ಯೋಧರು ಗಾಯಗೊಂಡಿದ್ದು, ಒಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:

ಶೋಧ ಕಾರ್ಯಾಚರಣೆ ತೀವ್ರ

ದಾಳಿಯ ಹಿಂದೆ ಇರುವವರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ನಡೆಸುತ್ತಿವೆ. ಕಳೆದ ಕೆಲ ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಅಸ್ಸಾಂ ರೈಫಲ್ಸ್ ಮೇಲೆ ನಡೆದ ಎರಡನೇ ಪ್ರಮುಖ ದಾಳಿಯಾಗಿರುವುದರಿಂದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !