ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಇದರ ಬೆನ್ನಲ್ಲೇ ಉಗ್ರರನ್ನು ಮಟ್ಟ ಹಾಕಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ.
ರಾಜನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥರ ಜೊತೆ ಘಟನೆ ಬಗ್ಗೆ ಮಾತುಕತೆ ನಡೆಸಿದ್ದು, ದೋಡಾ ಪ್ರದೇಶದಲ್ಲಿ ಪ್ರಸ್ತುತ ಸ್ಥಿತಿಗತಿ ಮತ್ತು ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಘಟನೆಗೆ ಪ್ರತಿಕಾರವಾಗಿ ಯಾವುದೇ ಕ್ರಮ ಕೈಗೊಳ್ಳ ಸಂಪೂರ್ಣ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.
ದೋಡಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿಯ ವೇಳೆ ಜಮ್ಮು-ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ದೋಡಾ ಜಿಲ್ಲೆಯ ದೇಸಾ ಎಂಬ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಸೋಮವಾರ (ಜುಲೈ 16) ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಉಗ್ರರಿಗಾಗಿ ನಡೆದ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಯೋಧರು ಕೂಡ ಗುಂಡಿನ ದಾಳಿ ಆರಂಭಿಸಿದ್ದಾರೆ. ರಾತ್ರೋರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.