ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲ ದಿನಗಳಿಂದ ಶಾಂತಿಯುತವಾಗಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರಿದಿದೆ.
ಭಾನುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಇಬ್ಬರು ವಲಸೆ ಕಾರ್ಮಿಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಸದ್ಯ ಗುಂಡಿನ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತಲುಪಿದ್ದು, ಪ್ರದೇಶವನ್ನು ಸುತ್ತುವರಿದಿವೆ. ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಿವೆ