ಹೊಸದಿಗಂತ ಡಿಜಿಟಲ್ ಡೆಸ್ಕ್:
ಟರ್ಕಿಯ ರಾಜಧಾನಿ ಅಂಕಾರಾದ ಬಳಿಯ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್‌ನ (ಟಿಎಐ) ಪ್ರಧಾನ ಕಚೇರಿಯ ಹೊರಗೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.
ಟಿಎಐ ಕಚೇರಿ ಬಳಿ ಬೃಹತ್ ಸ್ಫೋಟದಿಂದ 3 ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಉಗ್ರರ ಗುಂಪು ಕಟ್ಟಡದ ಒಳಗೆ ಬಂದಿದೆ. ಈ ವೇಳೆ ಓರ್ವ ಉಗ್ರ ತನ್ನನ್ನು ಸ್ಪೋಟಿಸಿಕೊಂಡಿದ್ದಾನೆ. ಭದ್ರತಾ ಪಡೆಗಳು ಓರ್ವ ಉಗ್ರನನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಅಲ್ಲಿನ ಕಂಪನಿಗಳಲ್ಲಿನ ಉದ್ಯೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂಕಾರಾದಿಂದ ಉತ್ತರಕ್ಕೆ 40 ಕಿಲೋಮೀಟರ್ ದೂರದಲ್ಲಿರುವ ಸಣ್ಣ ಪಟ್ಟಣವಾದ ಕಹ್ರಾಮಂಕಾಜಾನ್‌ನಲ್ಲಿ ಈ ದಾಳಿ ನಡೆದಿದೆ. ಸುದ್ದಿ ಮಾಧ್ಯಮಗಳ ವರದಿಯಲ್ಲಿ ದೊಡ್ಡ ಪ್ರಮಾಣದ ಬೆಂಕಿ ಮತ್ತು ಹೊಗೆಯನ್ನು ತೋರಿಸಿವೆ.