ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 3 ದಿನಗಳಲ್ಲಿ ಮೂರನೇ ಉಗ್ರ ದಾಳಿ ನಡೆದಿದ್ದು, ಸೇನಾ ನೆಲೆಯಲ್ಲಿದ್ದ ಸೈನಿಕರಿಗೆ ಗಾಯಗಳಾಗಿವೆ.
ಕಥುವಾ ದಾಳಿಯ ಕೆಲವೇ ಗಂಟೆಗಳ ಬಳಿಕ ಭಯೋತ್ಪಾದಕರು ಸೇನಾ ನೆಲೆ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಓರ್ವ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾನುವಾರ ರಿಯಾಸಿಯಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದ ಪರಿಣಾಮ 10 ಮಂದಿ ಪ್ರಾಣ ಕಳೆದುಕೊಂಡಿದ್ದರು, 30 ಮಂದಿ ಗಾಯಗೊಂಡಿದ್ದರು. ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆ ಒಂದು ಗುಂಡು ಬಸ್ ಚಾಲಕನ ತಲೆಗೆ ತಾಗಿದ್ದು, ನಿಯಂತ್ರಣ ಕಳೆದುಕೊಂಡ ಪರಿಣಾಮ ಬಸ್ ಕಂದಕಕ್ಕೆ ಬಿದ್ದಿತ್ತು.