ಅಪ್ಘಾನಿಸ್ತಾನದಲ್ಲಿ ಗುರುದ್ವಾರದ ಮೇಲೆ ಉಗ್ರರದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಗುರುದ್ವಾರ ಕರ್ತೆ ಪರ್ವಾನ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಗುರುದ್ವಾರ ಸಾಹಿಬ್ ಆವರಣದಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ. ಈ ದಾಳಿಯ ಹಿಂದೆ ಐಸಿಸ್ ಖೊರಾಸನ್ ಕೈವಾಡವಿದೆ ಎಂದು ಶಂಕಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.

ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಗುರುದ್ವಾರ ಕಾರ್ಟೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು ಅಫ್ಘಾನಿಸ್ತಾನದಲ್ಲಿರುವ ಸಿಖ್ಖರಿಗೆ ಜಾಗತಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವೂ ಕೂಡ ಈ ಕುರಿತು ಕಳವಳ ವ್ಯಕ್ತಪಡಿಸಿದ್ದು ಘಟನೆಯ ಬೆಳವಣಿಗೆಗಳ ಬಗ್ಗೆ ಗಮನ ಹರಿಸುತ್ತಿರುವುದಾಗಿ ಹೇಳಿದೆ.

ಮೂಲಗಳ ವರದಿಯ ಪ್ರಕಾರ ಅಪರಿಚಿತ ಶಸ್ತ್ರಧಾರಿಯೊಬ್ಬ ಇಂದು ಮುಂಜಾನೆ ಗುರುದ್ವಾರಕ್ಕೆ ಪ್ರವೇಶಿಸಿದ್ದ ಎನ್ನಲಾಗಿದ್ದು ಗುರುದ್ವಾರದಲ್ಲಿರುವವರೆಲ್ಲರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!