ಕಾಶ್ಮೀರದಲ್ಲಿ ಹಿಂದು ಯಾತ್ರಿಕರ ಮೇಲೆ ಉಗ್ರರ ದಾಳಿ: ರಜೌರಿಯ ಹಲವೆಡೆ NIA ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಹಿಂದು ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA Raid) ವಿವಿಧ ಸ್ಥಳಗಳಲ್ಲಿ ರೇಡ್‌ ನಡೆಸಿದೆ.

ಜೂನ್‌ 9ರಂದು ರಿಯಾಸಿ ಜಿಲ್ಲೆಯ ಪೌನಿ ಪ್ರದೇಶದಲ್ಲಿ ಭಯೋತ್ಪಾದಕರು ಶಿವ ಖೋರಿ ಗುಹಾಂತರ ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್‌ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ ಬಸ್‌ ಕಮರಿಗೆ ಬಿದ್ದು, 10 ಮಂದಿ ಸಾವನ್ನಪ್ಪಿದ್ದರು 33 ಮಂದಿ ಗಾಯಗೊಂಡಿದ್ದರು.

ಜೂನ್‌ 15ರಂದು ಪ್ರಕರಣ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಭಾನುವಾರ ಹಲವೆಡೆ ದಾಳಿ ನಡೆಸಿದೆ.

ಉಗ್ರರಿಗೆ ಆಶ್ರಯ, ಸಹಾಯ ನೀಡಿದ ಶಂಕಿತರ ಮೇಲೆ ಈ ರೇಡ್‌ ನಡೆದಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಕಳೆ ಹಾಕಿದ್ದಾರೆ.

ಇತ್ತೀಚೆಗಷ್ಟೇ ರಿಯಾಸಿ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೌರಿ ಜಿಲ್ಲೆಯಲ್ಲಿ ಹಕೀಮ್‌ ದಿನ್‌ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಈತನೇ ದಾಳಿಯ ರೂವಾರಿ ಆಗದಿದ್ದರೂ, ಉಗ್ರರ ದಾಳಿಗೆ ಅಗತ್ಯ ವಸ್ತುಗಳನ್ನು ಪೂರೈಸಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!