Tuesday, March 28, 2023

Latest Posts

ಪೊಲೀಸ್ ಕೇಂದ್ರ ಕಚೇರಿ ಮೇಲೆ ಉಗ್ರರ ದಾಳಿ: ಒಂಬತ್ತು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕಿಸ್ತಾನದಲ್ಲಿ ತಾಲಿಬಾನ್ ಭಯೋತ್ಪಾದಕರು ಮತ್ತೊಮ್ಮೆ ಉದ್ದಟತನ ಮೆರೆದಿದ್ದಾರೆ. ಪಾಕಿಸ್ತಾನದ ಕರಾಚಿ ಪೊಲೀಸ್ ಹೆಡ್ ಕ್ವಾರ್ಟರ್ಸ್ ಮೇಲೆ ಭಾರೀ ಶಸ್ತ್ರಸಜ್ಜಿತ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಪೊಲೀಸರು ಮತ್ತು ನಾಗರಿಕರೊಂದಿಗೆ ಐವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಕರಾಚಿ ಪೊಲೀಸ್ ಮುಖ್ಯಸ್ಥ ಜಾವೇದ್ ವೊಡೊ ಖಚಿತಪಡಿಸಿದ್ದಾರೆ. ದಾಳಿಯ ವೇಳೆ ಉನ್ನತ ಅಧಿಕಾರಿಗಳು ಕಚೇರಿಯಲ್ಲಿದ್ದರು ಎಂದು ತಿಳಿದುಬಂದಿದೆ.

ಪಾಕಿಸ್ತಾನಿ ತಾಲಿಬಾನ್ ಭಯೋತ್ಪಾದಕ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. ಕರಾಚಿ ಪೊಲೀಸ್ ಪ್ರಧಾನ ಕಚೇರಿಗೆ ನುಗ್ಗಿದ ಉಗ್ರರು ಮೊದಲು ಗ್ರೆನೇಡ್‌ನಿಂದ ದಾಳಿ ನಡೆಸಿದರು. ಬಳಿಕ ಮನಬಂದಂತೆ ಗುಂಡು ಹಾರಿಸಿದ್ದಾರೆ. ದಾಳಿಗೆ ಭದ್ರತಾ ಸಿಬ್ಬಂದಿ ತೀವ್ರ ಪ್ರತಿದಾಳಿ ನಡೆಸಿದರು. ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಯಲ್ಲಿ ಐವರು ಉಗ್ರರು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ.

ಕಳೆದೊಂದು ತಿಂಗಳಿನಿಂದ ಪಾಕಿಸ್ತಾನದಲ್ಲಿ ಸರಣಿ ಭಯೋತ್ಪಾದಕ ದಾಳಿಗಳು ನಡೆಯುತ್ತಿವೆ. ಕಳೆದ ತಿಂಗಳು (ಜನವರಿ) ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!