ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿಯನ್ನು ರಾಜ್ಯಸಭಾ ವಿರೋಧ ಪಕ್ಷ ನಾಯಕ, ಕಾಂಗ್ರೆಸ್ ಧುರೀಣ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.
ಇದೊಂದು ಹೇಡಿತನ ದಾಳಿ ಎಂದಿರುವ ಅವರು, ಇಂತಹಾ ನಿರ್ಲಜ್ಜ ದಾಳಿಗಳು ಮಾನವೀಯತೆಗೆ ಅಪಾಯಕಾರಿ ಎಂದಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಅವರು ಸಂತಾಪ ಸೂಚಿಸಿದ್ದಾರೆ.
ಈ ಘಟನೆಗೆ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹಿತ ಹಲವು ರಾಜಕೀಯ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ.