ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮಗಮ್ ಪ್ರದೇಶದಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
ಗಾಯಗೊಂಡ ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶ ಮೂಲದ ಸಂಜಯ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ದಾಳಿಯ ಮಾಹಿತಿ ಪಡೆದ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದೆ.