ಹೊಸದಿಗಂತ ಡಿಜಿಟಲ್ ಡೆಸ್ಕ್
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಓಸಿ) ಬಳಿಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣದ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.
ನೂರಕೋಟೆ ಗ್ರಾಮದಲ್ಲಿ ಭಾನುವಾರ ಸಂಜೆ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅಡಗುತಾಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎರಡು ಎಕೆ-47 ರೈಫಲ್ಸ್ ಗಳು ಮತ್ತು ಅದರ ಎರಡು ಮ್ಯಾಗಜೀನ್ ಗಳು- 63 ಗುಂಡು ಸುತ್ತುಗಳು, ಒಂದು 223 ಬೋರ್ ಏಕೆ ಗನ್, ಅದರ ಎರಡು ಮ್ಯಾಗಜಿನ್ ಗಳು- 20 ಗುಂಡು ಸುತ್ತುಗಳು ಮತ್ತು ಚೈನಾಮೇಡ್ ಪಿಸ್ತೂಲ್- ಮ್ಯಾಗಜಿನ್ ಹಾಗೂ ನಾಲ್ಕು ಸುತ್ತು ಗುಂಡುಗಳನ್ನು ಅಡಗುತಾಣದಿಂದ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ