ಜಮ್ಮು- ಕಾಶ್ಮೀರದಲ್ಲಿ ಉಗ್ರರ ಅಡಗುತಾಣ ಪತ್ತೆ ಹಚ್ಚಿದ ಸೇನೆ: ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಜಮ್ಮು- ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಬುಧವಾರ ಉಗ್ರರ ಅಡಗುತಾಣಗಳನ್ನು ಪತ್ತೆ ಹಚ್ಚಿವೆ.ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನಾಂಬ್ಲಾನ್ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆಯಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಸಂಗ್ರಹವನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಇದರಲ್ಲಿ ಫ್ಯೂಸ್, ಪ್ಲಾಸ್ಟಿಕ್ ಸ್ಫೋಟಕಗಳು, 104 ಸುತ್ತುಗಳ ಎಕೆ -47 ಮದ್ದುಗುಂಡುಗಳು, ಎರಡು ಎಕೆ -47 ಮ್ಯಾಗಜೀನ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು, ಒಂದು ಚೀಲ ಮತ್ತು ಎರಡು ಬ್ಯಾಗ್‌ಗಳು ಸೇರಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!