ಜಮ್ಮು-ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ: ಓರ್ವ ಯೋಧ ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಮಂಗಳವಾರ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ವಿಫಲಗೊಳಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ವೈಟ್ ನೈಟ್ ಕಾರ್ಪ್ಸ್, ಬಟ್ಟಲ್ ಸೆಕ್ಟರ್ ನಲ್ಲಿ ಮುಂಜಾನೆ 3 ಗಂಟೆ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನಾ ಪಡೆಗಳು ಪರಿಣಾಮಕಾರಿಯಾಗಿ ವಿಫಲಗೊಳಿಸಿದವು.

ಮೂಲಗಳ ಪ್ರಕಾರ, ಕೃಷ್ಣಗತಿ ಬೆಲ್ಟ್‌ನ ಬತ್ತಲ್ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರನ್ನು ಪರಿಣಾಮಕಾರಿಯಾಗಿ ಹಿಮ್ಮಟ್ಟಿಸಲಾಗಿದೆ. ಈ ವೇಳೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಸಾವನ್ನಪ್ಪಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಿ ಯೋಧನ ದೇಹವನ್ನು ಸೇನೆಗೆ ಹಸ್ತಾಂತರಿಸಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!